ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಛ ಅವರಿಗೆ ಜಿಲ್ಲಾಮಟ್ಟದ ‘ಸ್ವಚ್ಛತಾ ಹಿ ಸೇವಾ’ ಪುರಸ್ಕಾರ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಗೌರವ

 

 

ಬೆಳ್ತಂಗಡಿ: ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ನೀಡುವ ಜಿಲ್ಲಾಮಟ್ಟದ ‘ಸ್ವಚ್ಛತಾ ಹಿ ಸೇವಾ’ ಗೌರವಾರ್ಪಣೆಯನ್ನು ಉಜಿರೆ ಪಿಡಿಒ ಹಾಗೂ ಚಾರ್ಮಾಡಿ, ಲಾಯಿಲಾ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಛ ಅವರಿಗೆ ಮಂಗಳೂರಿನಲ್ಲಿ ಪ್ರದಾನ  ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ‌ ನಡೆದ ಸಮಾರಂಭದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಯಲು ಬಹಿರ್ದೆಸೆ ಮುಕ್ತವಾಗಿರುವ ದ.ಕ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೈರ್ಮಲ್ಯದಡಿ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪೂರಕ ಚಟುಟಿಕೆಗಳಾದ ಘನ ಮತ್ತು ದ್ರವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕಾಗುತ್ತದೆ. ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ ಎರಡು ವರುಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಶೆಟ್ಟಿ ನೊಚ್ಛ ಅವರು ‌ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿಸುವ ನಿಟ್ಟಿನಲ್ಲಿ ಸ್ವಚ್ಛ ಸಂಕೀರ್ಣ ಘಟಕವನ್ನು ವಿನೂತನ ರೀತಿಯಲ್ಲಿ ನಿರ್ವಹಿಸಿದ್ದಾರೆ. ಮುಖ್ಯವಾಗಿ ಹಸಿ ತ್ಯಾಜ್ಯದಿಂದ “ಉಜಿರೆ ಜನ್ಯ” ಎಂಬ ಕಾಂಪೊಸ್ಟ್ ಗೊಬ್ಬರ ತಯಾರಿ ಒಣ ತ್ಯಾಜ್ಯ ವಿಂಗಡಿಸಿ ಮರು ವಿಂಗಡನೆಗೆ ಕಳುಹಿಸುವುದು. ಹಾಗೂ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರ್ಯಾಯ ಬಳಸಬಹುದಾದ ಉತ್ಪನ್ನಗಳನ್ನು ತಯಾರಿಕೆಯ ಬಗ್ಗೆ ಯೋಜನೆಯನ್ನು ಅನುಷ್ಠಾನಗೊಳಿಸಿರುವುದನ್ನು ಗಮನಿಸಿ ಪುರಸ್ಕಾರ ನೀಡಲಾಗಿದೆ.
ಪುರಸ್ಕಾರ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.‌

error: Content is protected !!