ಬೆಳ್ತಂಗಡಿ: ಹಳೆಕೋಟೆ ಬಳಿಯ ಖಾಸಗಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿದಾಡಿದ್ದು, ಆರೋಪಿಗಳ ಪತ್ತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕಾಲೇಜಿನ ಹಳೆ ವಿದ್ಯಾರ್ಥಿಗಳು ದೂರು ದಾಖಲಿಸಿದ್ದು, ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಆರೋಪಿಗಳು ಪ್ರಾಂಶುಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದಲ್ಲದೆ ಕಾಲೇಜಿನ ಕುರಿತು ಮತೀಯ ಸಂದೇಶ ಹಾಕುವ ಮೂಲಕ ಕೋಮು ಸೌಹಾರ್ದ ಕದಡುವ ಪ್ರಯತ್ನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ದೂರಿನೊಂದಿಗೆ ವೈರಲ್ ಆದ ಸಂದೇಶದ ಪ್ರತಿಯನ್ನೂ ಹಳೆವಿದ್ಯಾರ್ಥಿಗಳು ನೀಡಿದ್ದಾರೆ ಎನ್ನಲಾಗಿದೆ.