ಖ್ಯಾತ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತ: ಚಿಂತಾಜನಕ ಸ್ಥಿತಿಯಲ್ಲಿ ಪವರ್ ಸ್ಟಾರ್: ಶೀಘ್ರ ಚೇತರಿಕೆಗೆ ಅಭಿಮಾನಿಗಳ ಪ್ರಾರ್ಥನೆ

 

 

 

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್​ ಆರೋಗ್ಯದಲ್ಲಿ ಏರುಪೇರಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ರಾಜ್​ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಆಸ್ಪತ್ರೆಯಲ್ಲಿ ನಟ ಪುನೀತ್​ಗೆ ಚಿಕಿತ್ಸೆ ಮುಂದುವರಿದಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪುನೀತ್ ಶೀಘ್ರ ಗುಣಮುಖರಾಗಲೆಂದು‌ ಅಭಿಮಾನಿಗಳು‌ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

error: Content is protected !!