ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಮಾರುವೇಷದಲ್ಲಿ ದಾಳಿ ಮಾಡಿದ ಎಎಸ್ಪಿ : ಎರಡು ಟಿಪ್ಪರ್ ,ಮೂರು ದೋಣಿ ವಶಕ್ಕೆ

 

 

 

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಅನೇಕ ಸಮಯಗಳಿಂದ ರಾಜಾರೋಷವಾಗಿ ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಟ್ವಾಳ ಎಎಸ್ಪಿ ಮತ್ತು ತಂಡ ಇಂದು ಬೆಳಗ್ಗಿನ ಜಾವ ಮಾರುವೇಷದಲ್ಲಿ ಹೋಗಿ ದಾಳಿ ಮಾಡಿದ್ದಾರೆ.

 

 

ದಾಳಿ ವೇಳೆ ಮರಳುಗಾರಿಕೆಗೆ ಬಳಸುತ್ತಿದ್ದ ಎರಡು ದೋಣಿ ಹಾಗೂ ಎರಡು ಟಿಪ್ಪರ್ ವಾಹನವನ್ನು ವಶಪಡಿಸಿಕೊಂಡು ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

 

 

ಉಜಿರೆ ಮತ್ತು ಸೋಮಂದಡ್ಕದ ನಿವಾಸಿಗಳಿಬ್ಬರ ಟಿಪ್ಪರ್ ವಾಹನ ವಶಪಡಿಸಿಕೊಳ್ಳಲಾಗಿದೆ.ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ನಡೆಸಿ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ

 

 

 

ಎರಡು ಕಡೆ ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

error: Content is protected !!