ಅನ್ಯ ಕೋಮಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರಿಕ್ಷಾ ಚಾಲಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು: ಬಾಲಕಿಯನ್ನು ಬೆದರಿಸಿ ದೌರ್ಜನ್ಯ ಎಸಗುತ್ತಿದ್ದ ಆರೋಪಿ

 

 

 

 

 

:

 

 

 

ಬೆಳ್ತಂಗಡಿ:.ಧರ್ಮೀಯ ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಬಳಿ ರಿಕ್ಷಾ ಚಾಲಕನಾಗಿರುವ ಹೊಸಮಜಲು ನಿವಾಸಿ ನೌಫಲ್ ಎಂಬಾತ ಆರೋಪಿಯಾಗಿದ್ದಾನೆ.
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಬಳಿಯ ರಿಕ್ಷಾ ಚಾಲಕ ಆರೋಪಿ ನೌಫಲ್ ಮೂರು ವರ್ಷದ ಹಿಂದೆ ಸಂತ್ರಸ್ಥೆಯ ಪರಿಚಯ ಮಾಡಿಕೊಂಡಿದ್ದ. ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಪದೇ ಪದೇ ಕರೆ ಮಾಡಿ ಮಾತನಾಡುತ್ತಿದ್ದ. ಆರೋಪಿಯು 2018ರ ಫೆಬ್ರವರಿ 15ರಂದು ಬಾಲಕಿಯ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ, ಇದೇ ವೇಳೆ ಆಕೆಯ ಖಾಸಗಿ ಫೋಟೋಗಳನ್ನು ತೆಗೆದು, ದೌರ್ಜನ್ಯದ ವಿಚಾರ ತಿಳಿಸಿದರೆ ಖಾಸಗಿ ಫೋಟೋಗಳನ್ನು ವೈರಲ್ ಮಾಡುವ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಬಳಿಕ ಆರೋಪಿಯು 2021ರ ಸೆ. 25ರಂದು ಮತ್ತೊಮ್ಮೆ ಬಾಲಕಿಯ ಮನೆಯಲ್ಲಿ ಯಾರು ಇಲ್ಲದ ವಿಚಾರ ಅರಿತು, ಅಲ್ಲಿಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
2021ರ ಫೆಬ್ರವರಿಯಲ್ಲಿ ಸುಳ್ಳು ಹೇಳಿ ಕರೆದುಕೊಂಡು ಹೋಗಿ‌‌ ಮಂಗಳೂರಿನ ಲಾಡ್ಜ್ ಒಂದರಲ್ಲಿ ಲೈಂಗಿಕ ದೌರ್ಜನ್ಯವನ್ನು ಆರೋಪಿ ಎಸಗಿದ್ದಾನೆ ಎನ್ನಲಾಗಿದೆ.
ನ.2ರಂದು ಬೆಳಗ್ಗೆ ನೌಫಲ್ ಮತ್ತೆ ಕರೆ ಮಾಡಿ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಬಾಲಕಿ ನಡೆದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

error: Content is protected !!