ವಿಧಾನ ಪರಿಷತ್‌ ಚುನಾವಣೆಗೆ ಮಹೂರ್ತ ನಿಗದಿಪಡಿಸಿದ ಚುನಾವಣಾ ಆಯೋಗ

 

 

 

ಬೆಂಗಳೂರು: ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ವೆಳಾಪಟ್ಟಿ ಪ್ರಕಟಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು ಮತದಾರರಾಗಿರುವ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಈ ಚುನಾವಣೆ ನಡೆಯಲಿದೆ.ನವೆಂಬರ್ 16 ರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ.23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನ.26 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಡಿ.14ಕ್ಕೆ ಮತಗಳ ಎಣಿಕೆ ನಡೆಸಿ ಚುನಾವಣೆ ಫಲಿತಾಂಶ ಪ್ರಕಟಿಸಲಾಗುತ್ತದೆ.ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್, ಮಾಜಿ ಸಭಾಪತಿ ಪ್ರತಾಪ ಚಂದ್ ಶೆಟ್ಟಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮೇಲ್ಮನೆಯ 25 ಸದಸ್ಯರ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗ ಚುನಾವಣೆ ನಡೆಸುತ್ತಿದೆ.

error: Content is protected !!