ಸರ್ಕಾರಿ ಗೌರವಗಳೊಂದಿಗೆ ಪಡಂಗಡಿ ಬೋಜರಾಜ ಹೆಗ್ಡೆ ಅಂತ್ಯ ಕ್ರಿಯೆ

 

 

ಬೆಳ್ತಂಗಡಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಬೋಜರಾಜ ಹೆಗ್ಡೆ ಅವರ ಅಂತ್ಯ ಕ್ರಿಯೆ ಪಡಂಗಡಿಯಲ್ಲಿ ಇಂದು ಸಕಲ ವಿಧಿವಿಧಾನ ಪ್ರಕಾರ ನಡೆಯಿತು. ಈ ಸಂದರ್ಭದಲ್ಲಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಪಡಂಗಡಿ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ , ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ,ಹಿರಿಯ ವಕೀಲ ನೇಮಿರಾಜ್ ಶೆಟ್ಟಿ, ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

 

 

 

 

 

 

 

 

 

 

error: Content is protected !!