ಶಿರ್ಲಾಲು ಗ್ರಾ.ಪಂ ಮಾಜಿ ಅಧ್ಯಕ್ಷ  ಕುರುಂಬಿಲಡ್ಕ  ಸುಂದರ ಸಾಲ್ಯಾನ್ ನಿಧನ

 

 

 

 

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಕುರುಂಬಿಲಡ್ಕ ನಿವಾಸಿ ಸುಂದರ ಸಾಲ್ಯಾನ್(70) ಅನಾರೋಗ್ಯದಿಂದ ಶನಿವಾರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ, ಶಿರ್ಲಾಲು ಗ್ರಾಮ ಪಂಚಾಯತ್ ಎರಡು ಬಾರಿ  ಅಧ್ಯಕ್ಷರಾಗಿ ಜನಸೇವೆ ಮಾಡಿದ್ದರು‌. ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದರು‌. ಶಿರ್ಲಾಲ್ ಮಹಾಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಇವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು‌. ಶಿರ್ಲಾಲು ಶ್ರೀ ಗುರುನಾರಾಯಣ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ, ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿ ಗೌರವಾಧ್ಯಕ್ಷರಾಗಿಯೂ‌ ಇದ್ದರು.
ಮೃತರು ಪತ್ನಿ ರಾಜಮ್ಮ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

error: Content is protected !!