ಬೆಳ್ತಂಗಡಿ: ಹರಿಯಾಣದ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ, ಆಶಿಕಾ, ಅಭಿಶೃತ್, ಮತ್ತು ಸುಜಿತ್ ಇವರನ್ನು ನ 22 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ “ಶ್ರಮಿಕ” ಶಾಸಕರ ಕಚೇರಿಯಲ್ಲಿ ಅಭಿನಂದಿಸಿ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ ಬೆಳಾಲು, ಬಂದಾರು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ, ಕಣಿಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಬಂದಾರು ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ ಗೌಡ ಮೊಗ್ರು,ದಿನೇಶ್ ಖಂಡಿಗ ಇನ್ನಿತರರು ಉಪಸ್ಥಿತರಿದ್ದರು.