ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ವತಿಯಿಂದ ತಾಲೂಕಿನ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಗುರುವಾಯನಕೆರೆ ಬಂಟರ ಭವನದಲ್ಲಿ ನ 28 ರಂದು ನಡೆಯಿತು.
ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜದ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಾನಿಗಳ ಮೂಲಕ ಇಂತಹ ದೊಡ್ಡ ಕೆಲಸವನ್ನು ಬೆಳ್ತಂಗಡಿ ಬಂಟರ ಸಂಘ ಮಾಡುತ್ತಿದೆ.ಈ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ.ಅದೇ ರೀತಿ ವಿಧ್ಯಾರ್ಥಿಗಳು ಕೂಡ ಉತ್ತಮ ರೀತಿಯಲ್ಲಿ ವಿಧ್ಯಾಭ್ಯಾಸ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆದು ತಂದೆ ತಾಯಿಗಳ ಹಾಗೂ ಸಮಾಜದ ಗೌರವವನ್ನು ಹೆಚ್ಚಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉದ್ಯಮಿ ಹರಿಪ್ರಕಾಶ್ ಶೆಟ್ಟಿ ಮಾತನಾಡಿ ವಿಧ್ಯಾರ್ಥಿಗಳು ಯಾವತ್ತೂ ಆಶಾವಾದಿಗಳಾಗಿರಬೇಕು. ಕಷ್ಟ ಪಟ್ಟು ಪ್ರಯತ್ನ ಪಟ್ಟರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಿದೆ ಎಂದರು. ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ ಪ್ರಸ್ತಾವನೆ ಮಾಡಿದರು.
ತಾಲೂಕು ಬಂಟರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ , ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಾಜು ಶೆಟ್ಟಿ ವಿದ್ಯಾರ್ಥಿಗಳ ವಿವರಗಳ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ, ಬಂಟರ ಸಂಘದ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ನವಶಕ್ತಿ , ಮಹಿಳಾ ವಿಭಾಗದ ಅಧ್ಯಕ್ಷೆ ಸಾರೀಕ ಡಿ. ಶೆಟ್ಟಿ ಯುವ ವಿಭಾಗದ ಅಧ್ಯಕ್ಷ ಕಿರಣ್ ಶೆಟ್ಟಿ, ಉಪಸ್ಥಿತರಿದ್ದರು.
ವಿದ್ಯಾರ್ಥಿ ನಿಧಿ ಸಂಚಾಲಕ ಜಯರಾಮ ಶೆಟ್ಟಿ,
ಮುಂಡಾಡಿಗುತ್ತು ಸ್ವಾಗತಿಸಿ ರವೀಂದ್ರ ಶೆಟ್ಟಿ ಬಳೆಂಜ ನಿರ್ವಹಿಸಿದರು.ಕೊನೆಯಲ್ಲಿ ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ ಧನ್ಯವಾದವಿತ್ತರು.