ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಧರ್ಮಸ್ಥಳ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದರ್ಶನ, ಧರ್ಮಾಧಿಕಾರಿ ಡಾ.‌ ವೀರೇಂದ್ರ ಹೆಗ್ಗಡೆಯವರ ಭೇಟಿ: ಸಚಿವರಿಗೆ ಬಿಜೆಪಿ ಮುಖಂಡರ ಸಾಥ್

 

 

ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕು ಪ್ರವಾಸದಲ್ಲಿರುವ
ವಿಧಾನ ಪರಿಷತ್ ಅಭ್ಯರ್ಥಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿಯ ಪ್ರಮುಖರು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಧರ್ಮಾಧಿಕಾರಿ ಡಾ.‌ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಕ್ಷೇತ್ರದ ಪರವಾಗಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಹಾಗೂ ದೇವಳದ ಪ್ರಬಂಧಕ ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನ ಪರಿಷತ್  ಶಾಸಕ ಪ್ರತಾಪಸಿಂಹ ನಾಯಕ್ , ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಹ ಪ್ರಬಾರಿ ರಾಜೇಶ್ ಕಾವೇರಿ,
ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ಸಂತೋಷ್ ರೈ ಬೋಳಿಯಾರ್, ರಣ್ ದೀಪ್ ಕಾಂಚನ್, ವೆಂಕಟ್ ಒಳಲಂಬೆ, ಸತೀಶ್ ಕುಂಪಲ, ದೇವದಾಸ್ ಶೆಟ್ಟಿ, ಕಸ್ತೂರಿ ಪಂಜ ಮೊದಲಾದವರು ಉಪಸ್ಥಿತರಿದ್ದರು.

 

 

 

 

 

error: Content is protected !!