ಧರ್ಮಸ್ಥಳಕ್ಕೆ ರಾಜ್ಯಪಾಲರ ಭೇಟಿ. ಭವ್ಯ ಮೆರವಣಿಗೆಯಲ್ಲಿ ಸ್ವಾಗತ ಅನ್ನಪೂರ್ಣ ಭೋಜನಾಲಯ ವೀಕ್ಷಿಸಿ ಮೆಚ್ಚುಗೆ

 

 

 

 

 

ಉಜಿರೆ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ.02 ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದರು.ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

 

 

ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ಶ್ರೇಯಸ್ ಕುಮಾರ್ ರಾಜ್ಯಪಾಲರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.

 

ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ರಾಜ್ಯಪಾಲರು ಅನ್ನಪೂರ್ಣ ಭೋಜನಾಲಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರಾಜ್ಯಪಾಲರಿಗೆ ಸವಿವರ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

 

 

 

 

 

ರಾಜ್ಯಪಾಲರು ಮಂಜೂಷಾ ವಸ್ತು ಸಂಗ್ರಹಾಲಯ ಹಾಗೂ ಕಾರ್ ಮ್ಯೂಸಿಯಂಗೂ ಭೇಟಿ ನೀಡಿ ಮಾಹಿತಿ ಪಡೆದರು.ನಂತರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದರು.

error: Content is protected !!