ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (83) ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ತಿರುಗಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತರಾಗಿದ್ದಾರೆ.
ನಾಳೆ ಹಿರಿಯ ನಟನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬೆಂಗಳೂರಿನ ವಿದ್ಯಾಪೀಠ ಸರ್ಕಲ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸ್ಕ್ಯಾನಿಂಗ್ ವರದಿಯಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿತ್ತು. ಇದರ ಬೆನ್ನಲ್ಲೇ ಸ್ಥಿತಿ ಗಂಭೀರವಾಗಿದ್ದರಿಂದ ಕೋಮಾಗೆ ಜಾರಿದ್ದರು. ಆದರೆ, ಮೂರು ದಿನಗಳ ಬಳಿಕ ಅವರು ಕೊನೆಯುಸಿರೆಳೆದಿದ್ದಾರೆ.