ಸೇನಾ ಹೆಲಿಕಾಪ್ಟರ್ ದುರಂತ ಗಂಭೀರ ಗಾಯಗೊಂಡಿದ್ದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನ.

 

ಬೆಂಗಳೂರು:  ತಮಿಳುನಾಡಿನ ನೀಲಗಿರಿ ಎಂಬಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ   ಗಂಭೀರವಾಗಿ ಗಾಯಗೊಂಡಿದ್ದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್  ಚಿಕಿತ್ಸೆ ಫಲಕಾರಿಯಾಗದೇ   ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ನೀಲಗಿರಿಯ ಕನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸೇನಾಪಡೆಗಳ ಮುಖ್ಯಸ್ಥರು ಸಾವಿಗೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಸೇನೆ ದೃಢಪಡಿಸಿದೆ.

ಟ್ವೀಟ್​ ಮೂಲಕ ಮಾಹಿತಿ ನೀಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11 ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ.ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್​​​ನಲ್ಲಿ ಉಪನ್ಯಾಸ ನೀಡಲು ರಾವತ್​ ತಮ್ಮ ಪತ್ನಿ ಹಾಗೂ ಸೇನಾ ಸಿಬ್ಬಂದಿ ಜೊತೆ ತೆರಳುತ್ತಿದ್ದರು. ಈ ವೇಳೆ ನೀಲಗಿರಿ ಕನೂರ್​​​ ಸಮೀಪ ವಿಮಾನ ಪತನಗೊಂಡಿತ್ತು.ಘಟನೆಯಲ್ಲಿ ಗಾಯಗೊಂಡಿರುವ ಗ್ರೂಪ್​ ಕ್ಯಾಪ್ಟನ್​ ವರುಣ್​​ ಸಿಂಗ್​​ ಎಸ್​​ಸಿ ವೆಲ್ಲಿಂಗ್ಟನ್​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೆಲಿಕಾಪ್ಟರ್​ ಪತನಗೊಳ್ಳಲು ಏನು ಕಾರಣ ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.

ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಕೂಡ ಟ್ವೀಟ್ ಮಾಡಿದ್ದು, ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ರಕ್ಷಣ ಸಿಬ್ಬಂದಿ ಮುಖ್ಯಸ್ಥ ಬಿಪಿನ್​​ ರಾವತ್​​​ ಅವರ ಪತ್ನಿ ಸೇರಿದಂತೆ ಇತರೆ 11 ಮಂದಿ ನಿಧನರಾಗಿದ್ದಾರೆಂದು ತಿಳಿಸಿದ್ದಾರೆ.

error: Content is protected !!