ಮೊಗೆರಡ್ಕ ಸರ್ಕಾರಿ ಶಾಲೆಯಲ್ಲಿ ಶ್ರಮದಾನ

 

 

ಮೊಗ್ರು :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ’ದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಶ್ರಮದಾನದಲ್ಲಿ‌ ಶಾಲಾ ಆವರಣ, ಅಂಗಣ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಧ್ಯಾಯಿನಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು.

error: Content is protected !!