ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್​ನ ಮಂಜುನಾಥ ಭಂಡಾರಿ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರ ಚುನಾವಣೆ

 

 

 

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು 5955 ಮತಗಳು ಸಿಂಧು ಮತಗಳಾಗಿದ್ದು ಇದರ ಪ್ರಕಾರ ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲ್ಲಲು 1,986 ಮತಗಳು ಬೇಕಿದ್ದವು‌. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು 3,672 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 2,079 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯ ಮತದಲ್ಲೇ ವಿಜಯಿಯಾಗಿದ್ದಾರೆ.ಚಲಾವಣೆಯಾದ ಮತಗಳಲ್ಲಿ 56 ಮತಗಳು ಅಸಿಂಧುವಾಗಿದ್ದವು. ಇನ್ನೋರ್ವ ಅಭ್ಯರ್ಥಿ ಎಸ್​​ಡಿಪಿಐನ ಶಾಫಿ ಬೆಳ್ಳಾರೆ 204 ಮತಗಳನ್ನು ಪಡೆದಿದ್ದಾರೆ.

error: Content is protected !!