ಡಿ. 28ರಂದು ಸಂಜೆ 5 ಗಂಟೆಗೆ ವಕೀಲರ ಭವನ ಉದ್ಘಾಟನೆ: ₹ 2.10 ಕೋಟಿ ವೆಚ್ಚ ಅನುದಾನದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಟ್ಟಡ: ಬೆಳ್ತಂಗಡಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಸಾದ್ ಮಾಹಿತಿ

 

 

 

 

ಬೆಳ್ತಂಗಡಿ: ಸರಕಾರದಿಂದ ಮಂಜೂರಾದ ಸುಮಾರು ₹ 2.10 ಕೋಟಿ ವೆಚ್ಚ ಅನುದಾನದಲ್ಲಿ ನಿರ್ಮಾಣಗೊಂಡ ವಕೀಲರ ಭವನವನ್ನು ಡಿ. 28ರಂದು ಸಂಜೆ 5 ಗಂಟೆಗೆ  ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಳ್ತಂಗಡಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಸಾದ್ ಕೆ.ಎಸ್. ತಿಳಿಸಿದರು.

 

 

ಅವರು ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಉಚ್ಚ ನ್ಯಾಯಮೂರ್ತಿ ಮತ್ತು ದ.ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ವಹಿಸಲಿದ್ದಾರೆ.‌  ಕರ್ನಾಟಕ ರಾಜ್ಯ ಸರ್ಕಾರದ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಸಣ್ಣ ನೀರಾವರಿ ಸಚಿವರಾದ ಜೆ.ಸಿ ಮಾಧು ಸ್ವಾಮಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಇಲಾಖೆ ಸಚಿವ ಎಸ್. ಅಂಗಾರ, ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಮಹಮ್ಮದ್ ನವಾಜ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಸರ್ವೋಚ್ಚ ನ್ಯಾಯಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪ ಸಿಂಹ ನಾಯಕ್, ಹರೀಶ್ ಕುಮಾರ್, ಭೋಜೇ ಗೌಡ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು, ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು, ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಪಿ.ಪಿ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ‌ನೀಡಿದರು.

ಕಟ್ಟಡದ ವಿಶೇಷತೆ:

ವಕೀಲರ ಭವನದ ನೆಲಮಹಡಿಯಲ್ಲಿ ಟೈಪಿಂಗ್ ವಿಭಾಗ ಮತ್ತು ಕ್ಯಾಂಟೀನ್, ಮೊದಲ ಮಹಡಿಯಲ್ಲಿ ಪುರುಷ ವಕೀಲರ ಕೊಠಡಿ, ಗ್ರಂಥಾಲಯ ಮತ್ತು ಅಧ್ಯಕ್ಷರ ಕೊಠಡಿ ಇರಲಿದೆ. ಎರಡನೇ ಮಹಡಿಯಲ್ಲಿ ಮುಖ್ಯವಾಗಿ ಕಾನ್ಫರೆನ್ಸ್ ಹಾಲ್, ಮಹಿಳಾ ವಕೀಲರ ಮತ್ತು ವಕೀಲರ ಸಂಘದ ಪದಾಧಿಕಾರಿಗಳ ಕೊಠಡಿಗಳು ಇರಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ  ಪಾಲ್ಗೊಳ್ಳಬೇಕಾಗಿ ವಿನಂತಿ  ಎಂದು ಪ್ರಸಾದ್ ಕೆ.ಎಸ್‌. ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಾರ್ ಅಸೋಸಿಯೇಷನ್‌ ನ ಹಿರಿಯ ಸದಸ್ಯ ಹಾಗೂ ಪ್ರಚಾರ ಸಮಿತಿ ಸಂಚಾಲಕ  ಅಜಿತ್ ಎನ್., ಪ್ರಚಾರ ಸಮಿತಿಯ ಸದಸ್ಯ ಹಾಗೂ ವಕೀಲರ ಸಂಘದ ಮಾಜಿ ಅಧ್ಯಕ್ಷ  ಶಶಿಕಿರಣ್ ಜೈನ್, ಕಾರ್ಯಕಾರಿ ಸಮಿತಿ ಸದಸ್ಯ ಶಿವಯ್ಯ ಎಸ್‌.ಎಲ್., ಸದಸ್ಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.
ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಮಾಜಿ ಪ್ರಧಾನ  ಕಾರ್ಯದರ್ಶಿ  ಮನೋಹರ್ ಕುಮಾರ್ ಇಳಂತಿಲ ವಂದಿಸಿದರು.

error: Content is protected !!