ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದಿಂದ ಸಂಚಾರ ವ್ಯವಸ್ಥೆ ಕುರಿತು ಮಾಹಿತಿ ಕಾರ್ಯಗಾರ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಡಿ.27 ಸೋಮವಾರದಂದು ಅಪರಾಹ್ನ 3 ಗಂಟೆಗೆ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ. ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸೂಕ್ತ ಮಾಹಿತಿ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಶಾಸಕರ ಕಚೇರಿ ಶ್ರಮಿಕ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.