ರಾಜ್ಯಾದ್ಯಂತ ಎರಡು ವಾರಗಳ‌‌ ಕಾಲ ವೀಕೆಂಡ್ ಕರ್ಪ್ಯೂ‌: ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಲಭ್ಯ: ನಾಳೆಯಿಂದ ಎರಡು ವಾರ ಬೆಂಗಳೂರಿನಲ್ಲಿ ಶಾಲೆಗಳು‌ ಬಂದ್, ಮತ್ತೆ ಆನ್ ಲೈನ್ ತರಗತಿ

 

 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಪ್ರಮಾಣದಲ್ಲಿ ಗಣನೀಯ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಬೆಂಗಳೂರಿಗೆ ಮಾತ್ರ‌ ಅನ್ವಯವಾಗುವಂತೆ ಶಾಲೆಗಳನ್ನು ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಮಂಗಳವಾರ ಸಂಜೆ ತಜ್ಞರ ಜೊತೆಗೆ ಸಭೆ‌ ನಡೆಸಿದ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5‌ ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. 10 ಮತ್ತು 12ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 9 ಹಾಗೂ 11ನೇ ತರಗತಿ ಬುಧವಾರದಿಂದಲೇ ಬಂದ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ವಿವರಿಸಿದರು.

error: Content is protected !!