ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ ರಾಜ್ಯ ಸರ್ಕಾರ,ತಕ್ಷಣ ಮೇಕೆದಾಟು ಪಾದಯಾತ್ರೆ ನಿಷೇಧಿಸುವಂತೆ ಮಹತ್ವದ ಆದೇಶ . ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ, ಎಸ್.ಪಿ ಗೆ ಸೂಚನೆ

 

 

 

ಬೆಂಗಳೂರು :   ಮೇಕೆದಾಟು ಪಾದಯಾತ್ರೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ದಿಢೀರ್​ ಆದೇಶ ಹೊರಡಿಸಿದೆ. ಪಾದಯಾತ್ರೆ ಬಗ್ಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ, ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್‌ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಎಸ್ ಪಿಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ.ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಕುರಿತು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಭೆ ನಡೆಸಿದ್ದು, ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ ಎಂಬ ಕಾರಣದಿಂದ ಮೇಕೆದಾಟು ಪಾದಯಾತ್ರೆಗೆ ಸರ್ಕಾರ ನಿರ್ಬಂಧ ವಿಧಿಸಿದೆ.
ಪಾದಯಾತ್ರೆ ಹೆಸರಿನಲ್ಲಿ ಬೈಕ್ ರ್ಯಾಲಿಗೂ ನಿರ್ಬಂಧ ಹಾಕಲಾಗಿದೆ. ಜಾಥಾ ಹೆಸರಿನಲ್ಲಿ ರಾಮನಗರಕ್ಕೆ ತೆರಳುವ ಹಾಗೂ ಹೊರಗೆ ಹೋಗುವ ವಾಹನಗಳಿಗೂ ನಿಷೇಧ ಹೇರುವಂತೆ ಸಾರಿಗೆ ಆಯುಕ್ತರು ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

error: Content is protected !!