ಬೇಲೂರಿನ ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್ ನಲ್ಲಿ ಆತ್ಮಹತ್ಯೆ

 

 

 

 

ಬೆಳ್ತಂಗಡಿ : ಹಾಸನ ಜಿಲ್ಲೆಯ ಬೇಲೂರು ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಕುಮಾರ್ ಎಂ ಎಸ್ (36) ಎಂಬವರು ಕಕ್ಕಿಂಜೆ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ 12 ಬುಧವಾರ ನಡೆದಿದೆ.
ಮಂಗಳವಾರ ಮನೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಬಿಟ್ಟು ಹೋಗಿದ್ದು ಬುಧವಾರ ಬೆಳಿಗ್ಗೆ 8 ಗಂಟೆಗೆ ಅವರ ಪತ್ನಿಯಲ್ಲಿ ಧರ್ಮಸ್ಥಳದಿಂದ 10 ಕಿ.ಮಿ ದೂರ ಇರುವುದಾಗಿ ತಿಳಿಸಿದ್ದಾರೆ ಈ ಬಗ್ಗೆ ಅನುಮಾನಗೊಂಡು ಅವರ ಪತ್ನಿ ಮತ್ತು ಸ್ನೇಹಿತರು ಧರ್ಮಸ್ಥಳದ ಕಡೆ ಹುಡುಕಾಡುತ್ತ ಬಂದಾಗ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ವಸತಿ ಗೃಹದ ಮುಂದೆ ಕುಮಾರ್ ಅವರು ತೆಗೆದುಕೊಂಡು ಬಂದಿದ್ದ ದ್ವಿಚಕ್ರ ವಾಹನ ನೋಡಿ ವಸತಿ ಗೃಹದಲ್ಲಿ ಹೋಗಿ ವಿಚಾರಿಸಿದಾಗ ಕೊಠಡಿಯನ್ನು ಪಡೆದುಕೊಂಡ ಬಗ್ಗೆ ಮಾಹಿತಿಯನ್ನು ನೀಡಿದ್ದು ಅದರಂತೆ ವಸತಿ ಗೃಹದ ಮೇಲ್ವಿಚಾರಕರೊಂದಿಗೆ ಹೋಗಿ ನೋಡಿದಾಗ ಕುಮಾರ್ ಪಡೆದುಕೊಂಡ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿಕೊಂಡಿದ್ದರು ಮದುವೆಯಾಗಿ ಒಂದು ಗಂಡು ಹಾಗೂ ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದರು ವ್ಯವಹಾರಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಕೈ ಸಾಲವನ್ನು ಪಡೆದಿದ್ದು ಕೈ ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದಬಂದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!