ಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ರಾಜ್ಯ ಸರಕಾರ: ವಾರಾಂತ್ಯ ನಿಷೇಧಾಜ್ಞೆ ರದ್ದು, ಮುಂದುವರಿದ ನೈಟ್ ಕರ್ಪ್ಯೂ‌: ಕೋವಿಡ್ ಮಾರ್ಗಸೂಚಿ ಪರಿಷ್ಕರಣೆ

 

 

 

 

ಬೆಂಗಳೂರು : ರಾಜ್ಯದಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸುವುದಾಗಿ ಸರ್ಕಾರ ಘೋಷಿಸಿದೆ. ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಸಿಎಂ ನೇತೃತ್ವದಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಿ ವಾರಾಂತ್ಯದ ನಿಷೇಧಾಜ್ಞೆ ರದ್ದುಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ಮಾಹಿತಿ ನೀಡಿದ್ದಾರೆ.ಇನ್ನೊಂದೆಡೆ ರಾಜ್ಯದಲ್ಲಿ ರಾತ್ರಿ ನಿಷೇಧಾಜ್ಞೆ ಮುಂದುವರೆಯಲಿದೆ, ಈ ವಾರದಿಂದಲೇ ವಾರಾಂತ್ಯದ ಕರ್ಫ್ಯೂ ರದ್ದು ಮಾಡಲಾಗಿದೆ. ಆದರೆ, ಸರ್ಕಾರದ ಉಳಿದೆಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ.5ರಷ್ಟು ಮಾತ್ರ ಇದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜನವರಿ 29ರವರೆಗೆ ಶಾಲೆ-ಕಾಲೇಜುಗಳನ್ನು ಬಂದ್​ ಮಾಡಲಾಗುತ್ತಿದೆ. ನಗರದಲ್ಲಿ ಶಾಲಾರಂಭದ ಬಗ್ಗೆ 29ರಂದು ನಡೆಯಲಿರುವ ಸಭೆಯಲ್ಲಿ ತೀರ್ಮಾನಿಸಲಾಗುವುದು. ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ಕಡೆ ಶಾಲೆ ಇರಲಿದೆ, ಸೋಂಕು ಹೆಚ್ಚಿದರೆ ಮಾತ್ರ ರಜೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್​ ಮಾಹಿತಿ ನೀಡಿದ್ದಾರೆ.

error: Content is protected !!