ಮದ್ದಡ್ಕ ಬೈಕ್ ಕಾರು ಡಿಕ್ಕಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು.

 

 

 

 

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿಯಿಂದ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತಿದ್ದ ಬೈಕ್ ಸವಾರನಿಗೆ ಮಂಗಳೂರಿನಿಂದ ಬರುತಿದ್ದ ಕಾರೊಂದು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಅವರು ಚಿಕಿತ್ಸೆಗೆ ಸ್ಪಂಧಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಯುವಕ ಸಕಲೇಶಪುರ ನಿವಾಸಿ ತಣ್ಣೀರುಪಂತ ಸಮೀಪದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಅರುಣ್ (23) ಎಂದು ತಿಳಿದು ಬಂದಿದೆ ಅವರು ಬೆಳ್ತಂಗಡಿ ಚರ್ಚ್ ರೋಡ್ ಸಮೀಪದ ಟಯರ್ ಕೇರ್ ಸೆಂಟರ್ ನಲ್ಲಿ ಕೆಲಸ ಮಾಡುತಿದ್ದರು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!