ಉಜಿರೆ ನೀರಚಿಲುಮೆ ಬಳಿ ಅಪರಿಚಿತ ವೃದ್ಧ ನೇಣುಬಿಗಿದು ಆತ್ಮಹತ್ಯೆ

 

 

 

.

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ – ಧರ್ಮಸ್ಥಳ ಹೆದ್ದಾರಿಯ ನೀರಚಿಲುಮೆ ಸಮೀಪ ರಸ್ತೆ ಬದಿಯಲ್ಲಿರುವ ಜಾಹೀರಾತು ಫಲಕದ ಕಬ್ಬಿಣದ ರಾಡ್ ಗೆ ತನ್ನಲಿದ್ದ ಶಾಲಿನಿಂದ ಅಪರಿಚಿತ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಾರು 65 ವರ್ಷದ ವ್ಯಕ್ತಿಯ  ದೇಹ   ನೇಣು ಹಾಕಿಕೊಂಡ ಬಟ್ಟೆ ತುಂಡಾಗಿ ಕೆಳಗೆ ಬಿದ್ದಿದ್ದು ಇಂದು ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಸಾಗಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

error: Content is protected !!