ಬೆಳ್ತಂಗಡಿ:ಜನರ ನೀರಿನ ಸಮಸ್ಯೆ ಹಾಗೂ ಅಂತರ್ಜಲ ಹೆಚ್ಚಿಸಲು ಇಂತಹ ಕಿಂಡಿ ಅಣೆಕಟ್ಟು ಸಹಕಾರಿಯಾಗಲಿದೆ. ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು ಅವರು ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಸಮೀಪದ ಮುಂಡೇಲು ಎಂಬಲ್ಲಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ನಿಧಿಯಲ್ಲಿ ₹ 1.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ ಹಲವಾರು ಕಡೆಗಳಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಅಂತರ್ಜಲ ಹೆಚ್ಚಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ.
ಅದಲ್ಲದೇ ಈ ಕಿಂಡಿ ಅಣೆಕಟ್ಟುಗಳು ಕೇವಲ ನೀರು ತಡೆಯುವ ಉದ್ಧೇಶಕ್ಕಾಗಿ ಮಾತ್ರ ಅಲ್ಲದೇ ಅದರ ಮೇಲೆ ವಾಹನ ಸಂಚಾರಿಸಲು ಸಾಧ್ಯವಾಗುವ ರೀತಿಯಲ್ಲಿ ನಿರ್ಮಾಣಗೊಂಡು ಜನರಿಗೆ ಸಂಪರ್ಕಗೊಳಿಸುವ ಸೇತುವೆ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಆರ್. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾಮ ಪಂಚಾಯತ್ ಸದಸ್ಯರು, ಲಾಯಿಲ ನೀರು ಮತ್ತು ನೈರ್ಮಲ್ಯ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಣ ಪೂಜಾರಿ ಕೈಪ್ಲೋಡಿ, ಎಪಿಎಂಸಿ ಸದಸ್ಯ ಈಶ್ವರ ಬೈರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು, ಗಿರೀಶ್ ಡೋಂಗ್ರೆ, ಬಿಜೆಪಿಯ ಪ್ರಮುಖರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಧಾಕರ್ ಬಿ.ಎಲ್. ಸ್ವಾಗತಿಸಿ, ಅರವಿಂದ ಲಾಯಿಲ ಧನ್ಯವಾದವಿತ್ತರು.