ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ :ತೃತೀಯ ಸ್ಥಾನ ಪಡೆದ ಇಳಂತಿಲದ ವಿದ್ಯಾರ್ಥಿಗಳು.

 

 

ಬೆಳ್ತಂಗಡಿ:ಭಾರತ ಚುನಾವಣಾ ಆಯೋಗ ನಡೆಸಿದ
ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸ.ಪ.ಪೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಳಂತಿಲ ಗ್ರಾಮದ ವಿದ್ಯಾರ್ಥಿಗಳಾದ ಅಂಕಿತಾ ಮತ್ತು ವೈಷ್ಣವಿ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಜೇತರಿಗೆ ಮಂಗಳೂರಿನ ಪುರಭವನದಲ್ಲಿ ಇತ್ತೀಚೆಗೆ ಜರಗಿದ ರಾಷ್ಟ್ರೀಯ ಮತದಾರರ ದಿನಾಚರಣೆಯ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿಗಳಾದ ಡಾ! ರಾಜೇಂದ್ರ, ಕೆ.ವಿ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನು ವಿತರಿಸಿದರು.

 

 

                             ವೈಷ್ಣವಿ

 

                             ಅಂಕಿತಾ

 

ಈ ಹಿಂದೆ ಪುತ್ತೂರಿನಲ್ಲಿ ನಡೆದ  ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಇದೇ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದರು. ಅಂಕಿತಾ,ಎ 10 ನೇ ತರಗತಿಯಲ್ಲಿ ಮತ್ತು ವೈಷ್ಣವಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

error: Content is protected !!