ದೇರಾಜೆಬೆಟ್ಟ ಕ್ಷೇತ್ರದ ಪುನರ್‌ ಪತಿಷ್ಠೆ: ಆಮಂತ್ರಣ ಪತ್ರ ಬಿಡುಗಡೆ

 

 

 

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟು ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಫೆ.19 ಮತ್ತು 20ರಂದು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯಲ್ಲಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಶುಕ್ರವಾರ ಬಿಡುಗಡೆ ಮಾಡಿದರು.

ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಹೇಮರಾಜ್ ಕೆ. ಬೆಳ್ಳಿಬೀಡು, ಕಾರ್ಯದರ್ಶಿ ನಾರಾಯಣ ಪೂಜಾರಿ ಉಚ್ಚೂರು, ವಿವಿಧ ಸಮಿತಿಗಳ ಸುರೇಂದ್ರ ಬಳ್ಳಾಲ್ ಮಲ್ಲಾರಬೀಡು, ಸುದರ್ಶನ್ ಜೈನ್ ಪಾಂಡಿಬೆಟ್ಟು, ಜಿನೇಂದ್ರ ಜೈನ್ ಹರಂಬೆಟ್ಟು, ಜಯವರ್ಮ ಬುಣ್ಣು ಕುಕ್ಕೆರಬೆಟ್ಟು, ಆದಿತ್ಯ ಪಿ.ಕೆ ಮತ್ತೊಟ್ಟು, ವಿಜಯ ಕುಮಾರ್‌ ಬಂಗ, ವಿಶುಕುಮಾರ್ ಜೈನ್ ಉಪಸ್ಥಿತರಿದ್ದರು.

 

 

ಇದಕ್ಕೂ ಮೊದಲು ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಮತ್ತು ಬೆಳ್ಳಿಬೀಡು ಪಾರ್ಶ್ವನಾಥ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

error: Content is protected !!