ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯದುಪತಿ ಗೌಡರಿಗೆ ಗೌರವಾರ್ಪಣೆ: ವಾಣಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳಿಂದ‌ ಸನ್ಮಾನ

 

 

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡರಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಲರ್ಸ್ ಕನ್ನಡ ವಾಹಿನಿಯ ಉದ್ಯೋಗಿ ಸನಲ್ ನಾಯರ್ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಗುಣ ಪ್ರಸಾದ್ ಉಪನ್ಯಾಸಕರು ಆಳ್ವಾಸ್ ಪದವಿ ಪೂರ್ವ ಕಾಲೇಜು, ಮುಖ್ಯ ಅತಿಥಿಗಳಾಗಿ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯಾ ಸ್ವಾಗತಿಸಿದರು, ಹಳೆ ವಿದ್ಯಾರ್ಥಿ‌ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಧ್ಯಾಪಕ ಮಾಧವ್ ಹೊಳ್ಳ ಪ್ರಸ್ತಾವನೆಗೈದರು, ಹಳೆ ವಿದ್ಯಾರ್ಥಿ ಜಗದೀಶ್ ಕನ್ನಾಜೆ ವಂದಿಸಿದರು.
ಹಳೆ ವಿದ್ಯಾರ್ಥಿ ಶಂಕರ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು 60ಕ್ಕೂ ಹೆಚ್ಚು ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

error: Content is protected !!