ಚಾರ್ಮಾಡಿ ಡಿಜಿಟಲ್‌ ಗ್ರಂಥಾಲಯ ಲೋಕಾರ್ಪಣೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ

 

 

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸವಲತ್ತು ವಿತರಣೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ನರೇಗಾ ಯೋಜನೆಯಡಿಯಲ್ಲಿ ನಿರ್ಮಣಗೊಳ್ಳಲಿರುವ
ಗ್ರಾಮೀಣ ಹಳ್ಳಿ ಸಂತೆ ಕಟ್ಟಡ ಶಿಲಾನ್ಯಾಸ, ಡಿಜಿಟಲ್ ಗ್ರಂಥಾಲಯ ಲೋಕಾರ್ಪಣೆ, ಸಂಜೀವಿನಿ ಮಹಿಳಾ ಒಕ್ಕೂಟದ ಕಚೇರಿ ಉದ್ಘಾಟನೆ, ಪರಿಶಿಷ್ಟ ಜಾತಿ ಪಂಗಡಗಳ ಸುಮಾರು 50 ಫಲಾನುಭವಿಗಳಿಗೆ ಟೈಲರಿಂಗ್ ಮೆಷಿನ್ ಹಾಗೂ ವಿಕಲಚೇತನರಿಗೆ ಗಾಲಿ ಕುರ್ಚಿ ಕೃತಕ ಕಾಲು ಹಸ್ತಾಂತರ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮೋದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ, ತಾ.ಪಂ ಮಾಜಿ ಸದಸ್ಯ ಕೊರಗಪ್ಪ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಮಾಜಿ ಪಂಚಾಯತ್ ಅಧ್ಯಕ್ಷೆ ಶೈಲಜಾ, ಅಶೋಕ್ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!