ತಾಲೂಕು ಮಟ್ಟದ ಭಜನಾ ಸ್ಪರ್ಧೆ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರಮಿಕ ಸೇವಾ ಟ್ರಸ್ಟ್ ಆಯೋಜನೆ. ಫೆ 13 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟನೆ.

 

 

 

ಬೆಳ್ತಂಗಡಿ : ವಿಶ್ವ ಹಿಂದು ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ತಾಲೂಕಿನ ಭಜನಾ ಮಂಡಳಿಗಳನ್ನು ಉತ್ತೇಜಿಸುವ ದೃಷ್ಠಿಯಿಂದ, ಯುವ ಜನತೆಯಲ್ಲಿ ಸಧ್ವಿಚಾರ ಧಾರೆಯನ್ನು, ಧಾರ್ಮಿಕ ಜಾಗೃತಿಯನ್ನು ಪ್ರೇರೇಪಿಸುವ ಸದಾಶಯದೊಂದಿಗೆ ತಾಲೂಕಿನ ಭಜನಾ ಮಂಡಳಿಗಳಿಗೆ ತಾಲೂಕು ಮಟ್ಟದ ಭಜನಾ ಸ್ಪರ್ಧೆಯನ್ನು ಏರ್ಪಡಿಸುತ್ತಿದ್ದು ಭಜನಾ ಸ್ಪರ್ಧೆಯು ಅಯಾಯ ಭಜನಾ ಮಂಡಳಿಗಳಲ್ಲಿಯೇ ನಡೆಯಲಿದೆ. ಈ ಭಜನಾ ಸ್ಪರ್ಧೆಯನ್ನು ಫೆ13 ಆದಿತ್ಯವಾರ ಶ್ರೀ ಶಾರದಾಂಬ ಭಜನಾ ಮಂಡಳಿ, ಶಾರದನಗರ, ಬುಳೆಕ್ಕಾರ ಕುಕ್ಕೇಡಿ ಇಲ್ಲಿ ಬೆಳಿಗ್ಗೆ:8.30ಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ವಿಭಾಗ ಸಹ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವೇಣೂರು ಪ್ರಖಂಡದ ಅಧ್ಯಕ್ಷ ಶಶಾಂಕ್ ಭಟ್ ಉಪಸ್ಥಿತರಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಭಜಕ ಬಂಧುಗಳು, ಹಿಂದೂ ಸಮಾಜದ ಬಂಧುಗಳು ಉಪಸ್ಥಿತರಿರಬೇಕೆಂದು ವಿಶ್ವ ಹಿಂದೂ ಪರಿಷತ್‍ನ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!