ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ನೋಂದಾವಣಿ ಕಛೇರಿ ಉದ್ಘಾಟನೆ: ಏ.27ರಂದು ಕಾರ್ಯಕ್ರಮ, ಅರ್ಜಿ ಆಹ್ವಾನ

 

 

 

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ನೋಂದಣಿ ಕಛೇರಿ ಉದ್ಘಾಟನೆ
ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 27 ರಂದು ಸಂಜೆ 6.50ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಇದರ ನೋಂದಣಿ ಕಛೇರಿಯನ್ನು ಆದಿತ್ಯವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್, ಮಹಾವೀರ ಅಜ್ರಿ ಮತ್ತು ಊರ ಮಹನೀಯರು ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648,

error: Content is protected !!