ಬೆಳ್ತಂಗಡಿ: ವೀರ ಸೈನಿಕರನ್ನು ಹೊತ್ತ ಮಿಲಿಟರಿ ವಾಹನಕ್ಕೆ ಸ್ಫೋಟಕ ತುಂಬಿದ ವಾಹನ ಡಿಕ್ಕಿ ಹೊಡೆಸಿದ ಪರಿಣಾಮ39ಕ್ಕೂ ಅಧಿಕ ಸೈನಿಕರು ವೀರ ಮರಣವನ್ನು ಅಪ್ಪಿದ ಪುಲ್ವಾಮಾ ಭಯೋತ್ಪಾದಕ ದಾಳಿಯ ಕರಾಳ ನೆನಪಿಗೆ ಮೂರು ವರ್ಷವಾಗಿದೆ.
2019ರ ಫೆಬ್ರವರಿ 14ರಂದು ಈ ಉಗ್ರರ ದಾಳಿ ನಡೆದಿತ್ತು. ಪಾಕಿಸ್ತಾನದ ಹೇಡಿತನದ ಅಮಾನವೀಯ ದುಷ್ಕೃತ್ಯ ಮರೆಯಲಾರದ ಕಹಿ ಘಟನೆಯಾಗಿ ಉಳಿಯಲಿದೆ.
ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್‌ಗೆ ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ, ಭಾರತೀಯ ಯೋಧರು ವೀರ ಮರಣವನ್ನಪ್ಪಿದ್ದರು. ಪಾಕಿಸ್ತಾನಿ ಉಗ್ರರ ಅಟ್ಟಹಾಸಕ್ಕೆ ಸಿಲುಕಿ 39ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಅಲ್ಲದೆ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು.
ಜೈಷ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯ ಬಳಿಕ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯ ಬಾಲಕೋಟ್ನಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಲಾಗಿತ್ತು.
ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಇಡೀ ದೇಶಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.