ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಇನ್ನಿಲ್ಲ

 

 

 

ಬೆಂಗಳೂರು: ಹಿರಿಯ ಕವಿ ನಾಡೋಜ, ಡಾ.ಚೆನ್ನವೀರ ಕಣವಿ ಧಾರವಾಡದ ಎಸ್​​ಡಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದ ಕಣವಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ್ದಾರೆ.

ಕಣವಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಸಂಜೆ 5ಕ್ಕೆ ನಡೆಯಲಿದೆ. ಸೃಷ್ಠಿ ಪಾರ್ಮಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧಾರ ಮಾಡಲಾಗಿದೆ. ಇದಕ್ಕೂ ಮುನ್ನ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಿಡಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ.ಕೊರೊನಾ ಕಾರಣಕ್ಕೆ ಜನವರಿ 14ರಂದು ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನವೀರ ಕಣವಿ ಅವರು ಕೆಲವು ದಿನಗಳ ಹಿಂದೆಯೇ ಕೋವಿಡ್​ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರು. ನಂತರ ಅಲ್ಲಿಯೇ ಇನ್ನಿತರ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

error: Content is protected !!