ಶಿವಮೊಗ್ಗ ಭಜರಂಗ ದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಮುಸಲ್ಮಾನ ಗೂಂಡಾಗಳಿಂದ ಕೊಲೆ : ಸಚಿವ ಈಶ್ವರಪ್ಪ ಗಂಭೀರ ಆರೋಪ

 

 

 

 

 

ಸಾಗರ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ   ಗಂಭೀರ ಆರೋಪ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಪ್ರಚೋದನಕಾರಿ ಹೇಳಿಕೆಯಿಂದ ಗೂಂಡಾಗಿರಿ:

ಬೆಂಗಳೂರಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎಂದೂ ಕೂಡ ಈ ಗೂಂಡಾಗಿರಿ ಇರಲಿಲ್ಲ. ಆದ್ರೆ ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಈ ಗೂಂಡಾಗಿರಿ ನಡೆಯುತ್ತಿದೆ. ಅದನ್ನು ನಾವು ದಮನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಹತ್ಯೆಯಾದ ಯುವಕನಿಗೆ ಮದುವೆಯಾಗಿಲ್ಲ. ಆತ ತುಂಬಾ ಪ್ರಾಮಾಣಿಕನಾಗಿದ್ದ. ಈ ಬಗ್ಗೆ ಸಿಎಂ, ಗೃಹ ಸಚಿವರ ಜೊತೆ ಮಾತನಾಡಿದ್ದು, ತನಿಖೆ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಭಾನುವಾರ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷಾ ಎಂಬಾತನ ಹತ್ಯೆ ನಡೆದಿದ್ದು, ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

error: Content is protected !!