ಹಿಜಾಬ್ ವಿವಾದ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈ ಕೋರ್ಟ್

 

 

ಬೆಂಗಳೂರು:ರಾಜ್ಯದ ಕೆಲವು ಶಾಲೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ವಸ್ತ್ರಸಂಹಿತೆ ನಿಗದಿಪಡಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಈ ಕುರಿತಂತೆ ಸಲ್ಲಿಸಿರುವ 8 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

error: Content is protected !!