ಲೇಡಿಗೋಷನ್ ಆಸ್ಪತ್ರೆಗೆ ರಾಣಿ ಅಬ್ಬಕ ಹೆಸರಿಡಲು ಸರ್ಕಾರಕ್ಕೆ ಪ್ರಸ್ತಾವನೆ. ಸಚಿವ ಸುನೀಲ್ ಕುಮಾರ್ ಹೇಳಿಕೆ

 

 

 

ಮಂಗಳೂರು:ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರು ಇಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು ಅವರು ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರು ಇಡಲು ಸರಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ.ಸ್ವಾತಂತ್ರ್ಯ ಅಮೃತಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ನಾಡಿಗೆ ಪರಿಚಯ ಮಾಡುವ ಅಗತ್ಯ ಇರುವ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಬ್ಬಕ್ಕನ ಹೆಸರಿಟ್ಟಲ್ಲಿ  ಯಾರಾದರೂ ವಿರೋಧ ವ್ಯಕ್ತಪಡಿಸಬಹುದೇ ಎಂಬುವುದನ್ನು ಕಾದು ನೋಡಬೇಕಾಗಿದೆ ಎಂದರು.

error: Content is protected !!