ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ: ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಶಾಸಕ ವಸಂತ ಬಂಗೇರ

 

 

 

ಬೆಳ್ತಂಗಡಿ:ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ತೀರಾ ನಿರಾಶಾದಾಯಕ ಬಜೆಟ್.ಈ ಬಜೆಟ್ ನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಲ್ಲ ಕೋವಿಡ್ ನಂತರ ದಿನಗಳಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಯಾವುದೇ ರೀತಿಯ ಪುನಶ್ಚೇತನದ ಕಾರ್ಯಕ್ರಮಗಳನ್ನು ಘೋಷಿಸದಿರುವುದು ದುರದೃಷ್ಟಕರ ವಿಚಾರ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿರುವ ಈ ಬಜೆಟ್ ಜನ ವಿರೋಧಿ ಬಜೆಟ್ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

error: Content is protected !!