ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ ನಿಧನ

 

 

ದೆಹಲಿ: ಸ್ಪಿನ್ ಮಾಂತ್ರಿಕ ಆಸ್ಟ್ರೇಲಿಯಾದ ಕ್ರಿಕೆಟ್‌ ದಂತಕಥೆ ಶೇನ್​ ವಾರ್ನ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 52 ವರ್ಷ ವಯಸ್ಸಾಗಿತ್ತು ಈ ಬಗ್ಗೆ ಆಸ್ಟ್ರೇಲಿಯಾದ ಫಾಕ್ಸ್ ಕ್ರಿಕೆಟ್ ವರದಿ ಮಾಡಿದ್ದು, ಥಾಯ್ಲೆಂಡ್‌ನಲ್ಲಿ ಸಾವನ್ನಪ್ಪಿದ್ದಾರೆಂಬ ಮಾಹಿತಿ ನೀಡಿದೆ.ಸಾರ್ವಕಾಲಿಕ ಶ್ರೇಷ್ಠ ಲೆಗ್​ ಸ್ಪಿನ್ನರ್​​ ಆಗಿದ್ದ ಶೇನ್​ ವಾರ್ನ್​​ ಕ್ರಿಕೆಟ್​​ ಜಗತ್ತಿನಲ್ಲೇ ತಮ್ಮದೇ ಆದ ಛಾಪು ಮೂಡಿಸಿದ್ದರು.ಆಸ್ಟ್ರೇಲಿಯಾ ಪರ 145 ಟೆಸ್ಟ್​​​, 194 ಏಕದಿನ ಹಾಗೂ 73 ಟಿ20 ಪಂದ್ಯಗಳನ್ನಾಡಿರುವ ಇವರು, ಕ್ರಮವಾಗಿ 708, 293 ಹಾಗೂ 70 ವಿಕೆಟ್ ಕಿತ್ತಿದ್ದಾರೆ.

error: Content is protected !!