ಶಾಸಕ ಹರೀಶ್ ಪೂಂಜ ಇಡೀ ಜಿಲ್ಲೆಗೆ ಮಾದರಿ: ಬೆಳ್ತಂಗಡಿಯಲ್ಲಿ “ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಸತೀಶ್ ಕುಂಪಲ ಹೇಳಿಕೆ

 

 

 

ಬೆಳ್ತಂಗಡಿ: ಪಕ್ಷವನ್ನು ಒಟ್ಟಾಗಿ ಸೇರಿಸಿಕೊಂಡು ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳು ಜಿಲ್ಲೆಗೆ  ಮಾದರಿ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಬಿಜೆಪಿ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ, ಮಹಾಶಕ್ತಿ ಕೇಂದ್ರ ಪ್ರಮುಖರು, ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರೊಂದಿಗೆ “ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

 

 

ಈ ಕಾರ್ಯಗಾರ ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಗೆ ಪ್ರೇರಣೆಯಾಗಲಿದೆ. ಹರೀಶ್ ಪೂಂಜ ಶಾಸಕರಾದ ನಂತರದಲ್ಲಿ ಬೆಳ್ತಂಗಡಿಯನ್ನು ಎಲ್ಲರೂ ಬೊಟ್ಟು ಮಾಡಿ ತೋರಿಸುವ ರೀತಿಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಇಲ್ಲಿ ನಡೆಯುತ್ತಿದೆ. ಮೂಲಭೂತ ಸೌಕರ್ಯಗಳನ್ನು ಯಾವ ರೀತಿ ತನ್ನ ಕ್ಷೇತ್ರದ ಜನಸಾಮಾನ್ಯರಿಗೆ ಮುಟ್ಟಿಸಬೇಕು ಎಂಬುವುದನ್ನು ಶಾಸಕ ಹರೀಶ್ ಪೂಂಜ ಅವರಿಂದ ತಿಳಿದುಕೊಳ್ಳಬೇಕಾಗಿದೆ ಎಂದರು.

 

 

ಶಾಸಕ ಹರೀಶ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿ ಶಾಸಕನ ನೆಲೆಯಲ್ಲಿ ಮಾಡಿರುವ ಕಾರ್ಯವನ್ನು ನಮ್ಮ ಪದಾಧಿಕಾರಿಗಳ ಮುಂದೆ ಇಟ್ಟು ಮುಂದಿನ ದಿನಗಳಲ್ಲಿ ತಾಲೂಕಿನ 81 ಗ್ರಾಮದ 241 ಬೂತ್ ಗಳಲ್ಲಿರುವ ಜನರಿಗೆ ಸವಿಸ್ತಾರವಾದ ಮಾಹಿತಿಯನ್ನು ನೀಡುವಂತಹ ನಿಟ್ಟಿನಲ್ಲಿ ಮಾಹಿತಿಯ ಜೊತೆಗೆ ಸಂವಾದ ಕಾರ್ಯಕ್ರಮ ಎರಡನೇ ಬಾರಿ ಆಯೋಜಿಸಲಾಗಿದೆ. ಕೆಲವು ದಿನಗಳ ಹಿಂದೆ ತಾಲೂಕಿನ ಹಿರಿಯ ಕಾರ್ಯಕರ್ತರನ್ನು ಕರೆದು ತಾಲೂಕಿನ ಸಮಗ್ರವಾದ ಅಭಿವೃದ್ಧಿಯ ದೃಷ್ಟಿಯಿಂದ ಕಳೆದ ನಾಲ್ಕು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಸಾಧನೆಗಳನ್ನು ಕೆಲಸ ಕಾರ್ಯಗಳನ್ನು ಅವರ ಮುಂದೆ ಇಡುವಂತಹ ಪ್ರಾಮಾಣಿಕ ಪ್ರಯತ್ನವನ್ನು ಈ ಕ್ಷೇತ್ರದ ಶಾಸಕನಾಗಿ ಮಾಡಿದ್ದೆ. ಇಂದು ಎರಡನೇ ಬಾರಿ ಪದಾಧಿಕಾರಿಗಳಿಗೆ ಮತ್ತು ನಮ್ಮ ಶಕ್ತಿ ಕೇಂದ್ರದ ಪ್ರಮುಖರಿಗೆ ನಮ್ಮ ಕ್ಷೇತ್ರದ ಮೂಲೆ ಮೂಲೆಯಲ್ಲಿ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಪರಿಚಯಗಳು ಕೆಲಸ ಕಾರ್ಯಗಳ ಸ್ಥಿತಿಗತಿಗಳು ಗೊತ್ತಾಗಬೇಕು ಅವರಿಗೆ ಮನದಟ್ಟಾಗಬೇಕು ಎಂಬ ದೃಷ್ಟಿಯಿಂದ ಶಾಸಕನಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಎಲ್ಲರ ಸಹಕಾರದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

 

ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಸ್ವಾಗತಿಸಿದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ತಾಲೂಕು ಉಸ್ತುವಾರಿ ಹರಿಕೃಷ್ಣ ಬಂಟ್ವಾಳ್ , ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಬಿಜೆಪಿ ಉಪಾಧ್ಯಕ್ಷ ಸೀತಾರಾಮ ಬೆಳಾಲು ವಂದಿಸಿದರು.

error: Content is protected !!