ಬೆಳ್ತಂಗಡಿ:ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಕನ್ನಾಜೆಯ ಸುರಕ್ಷಾ ಆಚಾರ್ಯ ಅವರು ಬಿಡಿಸಿದ ಚಿತ್ರ ಅತಿ ಸಣ್ಣ ಮಂಡಲ ಆರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕನ್ನಾಜೆ ನಿವಾಸಿಗಳಾದ ಶ್ರೀಮತಿ ಸರಸ್ವತಿ ಹಾಗೂ ಚಂದ್ರಶೇಖರ ಅವರ ಪುತ್ರಿ ಸುರಕ್ಷಾ ಆಚಾರ್ಯ ಬಿಡಿಸಿದ ಮಂಡಲ ಆರ್ಟ್ ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಕಡೆಯಿಂದ ಅತಿ ಸಣ್ಣ ಮಂಡಲ ಆರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಾಧನೆ ಮಾಡಿದ ಇವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದ್ದಾರೆ.