ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಮಾ.16ರಿಂದ 12 ವರ್ಷದಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದು, ಮಾ. 16ರಿಂದ 12, 13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಟ್ವೀಟ್ ನಲ್ಲಿ, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು. ಅದೇ ರೀತಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.