ನಾಳೆ ಹಿಜಾಬ್ ತೀರ್ಪು ಹಿನ್ನೆಲೆ ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ದ.ಕ.ಜಿಲ್ಲಾಧಿಕಾರಿಯಿಂದ ಆದೇಶ

 

 

ಮಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.ಈ ಹಿನ್ನೆಲೆಯಲ್ಲಿ ದಕ್ಷಿ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಅಂಗನವಾಡಿಗಳಿಗೆ ಮಾ 15 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.ಬಾಹ್ಯ ಪರೀಕ್ಷೆಗಳು ಇದ್ದರೆ ನಿಗದಿಯಂತೆ ನಡೆಯಲಿದ್ದು ಅಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ವಿವರ

ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಪ್ರಕರಣ ಕೇವಲ ಧಾರ್ಮಿಕ ಸೂಕ್ಷ್ಮ ಸಂಗತಿಯನ್ನಷ್ಟೇ ಒಳಗೊಂಡಿದೆಯಲ್ಲದೇ, ರಾಜಕೀಯವಾಗಿಯೂ ತಳುಕು ಹಾಕಿಕೊಂಡಿರುವುದರಿಂದ ಹೈಕೋರ್ಟ್ ಯಾವುದೇ ತೀರ್ಪು ನೀಡಿದರೂ ಅರ್ಜಿದಾರ ವಿದ್ಯಾರ್ಥಿನಿಯರು ಅಥವಾ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಎಲ್ಲ ಸಾಧ್ಯತೆಯೂ ಇದೆ.

ಮಧ್ಯಂತರ ಆದೇಶ:

ಹಿಜಾಬ್ ನಿರ್ಬಂಧಿಸಿದ ಬಳಿಕ ರಾಜ್ಯದಲ್ಲಿ ಸಾಕಷ್ಟು ಪ್ರತಿಭಟನೆ, ಗಲಭೆಗಳು ಉಂಟಾಗಿದ್ದವು. ಪರಿಣಾಮ ಶಾಲಾ-ಕಾಲೇಜುಗಳ ವಾತಾವರಣ ಹದಗೆಟ್ಟಿದ್ದರಿಂದ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನ್ಯಾಯಾಲಯ ಫೆ.10ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿತ್ತು. ಆದೇಶದಲ್ಲಿ, ಪ್ರಕರಣ ಇತ್ಯರ್ಥವಾಗುವವರೆಗೂ ಸಮವಸ್ತ್ರ ಸಂಹಿತೆ ಜಾರಿ ಮಾಡಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆ ಹೊಂದಿರುವ ಉಡುಪು ಧರಿಸಿ ಹೋಗಬಾರದು ಎಂದು ಸ್ಪಷ್ಟಪಡಿಸಿತ್ತು.

error: Content is protected !!