ಬೆಂಗಳೂರು: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.. ಸರ್ಕಾರದ ಆದೇಶ ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿದೆ.
ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. 11 ದಿನಗಳ ವಿಚಾರಣೆ ಬಳಿಕ ಫೆಬ್ರವರಿ 25ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು. ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಇಂದು ತೀರ್ಪು ಪ್ರಕಟಿಸಿದೆ.