ಬೆಳ್ತಂಗಡಿ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು E-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದುದರಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು PM-KISAN ಪೋರ್ಟಲ್‌ನ Farmers Corner ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ವೀಕರಿಸಿದ OTPಯನ್ನು ದಾಖಲಿಸಿ E-KYC ಮಾಡಿಸಿಕೊಳ್ಳಬಹುದಾಗಿದೆ ಅಥವಾ ಯಾವ ಫಲಾನುಭವಿಯ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯು ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆಗೆ E-KYC ಗಾಗಿ ಕಳಿಸಿದ OTPಯು ಸ್ವೀಕೃತವಾಗುವುದಿಲ್ಲವೊ ಅಂತಹ ರೈತರು ನಾಗರಿಕ ಸೇವಾ ಕೇಂದ್ರಗಳಿಗೆ (CSC) ತೆರಳಿ ಬಯೋಮೆಟ್ರಿಕ್’ ಮೂಲಕ E-KYC ನ್ನು ಮಾಡಿಸಲು ದಿನಾಂಕ:31.03.2022 (ಇವತ್ತು) ಕೊನೆಯ ದಿನವಾಗಿದೆ ಅದ್ದರಿಂದ ದಯವಿಟ್ಟು ಮಾಡಿಸದೇ ಇರುವವರು E-KYC ಮಾಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.
(ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತಸಂಪರ್ಕಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: