ನಿಷೇಧಾಜ್ಞೆ‌ ನಿಯಮ ಉಲ್ಲಂಘನೆ ಆರೋಪ, ಎಸ್.ಡಿ.ಪಿ.ಐ‌. ಮುಖ‌ಂಡರ ವಿರುದ್ಧ ಬೆಳ್ತಂಗಡಿ ತಹಶೀಲ್ದಾರ್ ದೂರು ದಾಖಲು: ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಧ್ವನಿವರ್ಧಕ ಬಳಕೆ, ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವ ಉಲ್ಲೇಖ

 

ಫೈಲ್ ಪೋಟೊ.

ಬೆಳ್ತಂಗಡಿ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ನೀಡಿರುವ ದೂರಿನಂತೆ ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಯವರು ಘೋಷಿಸಿದ ನಿಷೇಧಾಜ್ಞೆ ಜಾರಿಯಲ್ಲಿರುವಾಗಲೇ ಮಾ.29ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಕಾನೂನನ್ನು ಮೀರಿ ಗುಂಪು ಸೇರಿ ಧ್ವನಿವರ್ಧಕ ಉಪಯೋಗಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವ ಬಗ್ಗೆ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

error: Content is protected !!