ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು

 

 

 

ಮಂಗಳೂರು; ಹಿಂದೂ  ಮುಖಂಡ ಆರ್ ಎಸ್ ಎಸ್ ನಾಯಕ  ಕಲ್ಲಡ್ಕ ಪ್ರಭಾಕರ್ ಭಟ್  ಅವರಿಗೆ ಲಘು ಹೃದಯಾಘಾತವಾಗಿ   ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿಕೊಳ್ಳಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಅವರ ಆಪ್ತವಲಯದಿಂದ ತಿಳಿದು ಬಂದಿದೆ.ಎ 05 ರಂದು ಕಲ್ಲಡ್ಕದಲ್ಲಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿದ್ದು ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತಿದೆ ಈಗ ಆರೊಗ್ಯದಲ್ಲಿ ಚೇತರಿಸಿಕೊಳ್ಳುತಿದ್ದಾರೆ ಯಾರೂ ಕೂಡ ಆತಂಕ ಪಡಬಾರದು ಎಂದು ಅವರ ಆಪ್ತರು ತಿಳಿಸಿದ್ದಾರೆ.

error: Content is protected !!