ಸ್ಟ್ರೆಕ್ಚರ್ ಮೇಲೆ ಮಲಗಿಕೊಂಡೇ ಪರೀಕ್ಷೆ ಎದುರಿಸಿದ ಬೆಳ್ತಂಗಡಿಯ ವಿದ್ಯಾರ್ಥಿನಿ!: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಅಪಘಾತ: ಮತ್ತೊಬ್ಬ ವಿದ್ಯಾರ್ಥಿನಿ ಸಹಾಯದೊಂದಿಗೆ ಪರೀಕ್ಷೆ ಪೂರೈಸಿದ ನಾವೂರಿನ ಬಾಲಕಿ ಬೆಳ್ತಂಗಡಿ ಪರೀಕ್ಷೆ ಬರೆಯಲು ತಾಯಿ ಜೊತೆ ಹೋಗುತ್ತಿದ್ದಾಗ ಅಪಘಾತವಾಗಿ ಗಾಯ. ವಿದ್ಯಾರ್ಥಿನಿಯನ್ನು ಆಂಬುಲೆನ್ಸ್ ನಲ್ಲಿ ಕರೆತಂದು ಪರೀಕ್ಷೆ ಬರೆಸಿದ ಶಾಲಾ ಆಡಳಿತ‌ ಮಂಡಳಿ.

 

 

ಬೆಳ್ತಂಗಡಿ : SSLC ವಿಧ್ಯಾರ್ಥಿಗಳ ಕೊನೆಯ ವಿಜ್ಞಾನ ಪರೀಕ್ಷೆಯಾಗಿರುವ ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ SSLC ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ(15) ಇಂದು ಪರೀಕ್ಷೆ ಬರೆಯಲು ತನ್ನ ತಾಯಿ ಮಮತಾ ಜೊತೆ ಸ್ಕೂಟರ್ ನಲ್ಲಿ ಪರೀಕ್ಷಾ ಕೇಂದ್ರವಾದ ಬೆಳ್ತಂಗಡಿ ವಾಣಿ ಕಾಲೇಜ್ ಗೆ ಬರುತ್ತಿದ್ದಾಗ ಬೆಳ್ತಂಗಡಿಯ ಲಾಯಿಲದ ಪುತ್ರಬೈಲ್ ಅಂಗನವಾಡಿ ಎದುರು ಸ್ಕೂಟರ್ ಸ್ಕೀಡ್ ಅಗಿ ಪಲ್ಟಿಯಾಗಿದೆ ಈ ವೇಳೆ ತಾಯಿ ಮಮತಾಗೆ ಯಾವುದೇ ಗಾಯವಾಗಿಲ್ಲ ಮಗಳು ತನ್ವಿಗೆ ಮಾತ್ರ ಗಾಯವಾಗಿದ್ದು ತಕ್ಷಣ ಉಜಿರೆ ಬೆನಕ‌ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡಿದ್ದು ಕೈ,ಕಾಲು ಹಾಗೂ ಮುಖಕ್ಕೆ ಗಾಯವಾಗಿದ್ದು ಯಾವುದೇ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ಪರೀಕ್ಷೆ ಮಾಡಿ ತಿಳಿಸಿದ್ದಾರೆ.

 

 

ಬಳಿಕ ತಾಯಿ ತನ್ನ ಮಗಳ ಶಾಲಾ ಆಡಳಿತ ಮಂಡಳಿಗೆ ಕರೆ ಮಾಡಿ ಮಾಹಿತಿ ನೀಡಿದ ತಕ್ಷಣ ಆಸ್ಪತ್ರೆಗೆ ಬಂದು ವಿಚಾರಿಸಿ ನಂತರ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವುದರಿಂದ ಅದೇ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ದಾಖಲೆಗಳನ್ನು ನೀಡಿ ಆಕೆ ಹೇಳಿದಾಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವಾಣಿ ಕಾಲೇಜಿನ ಪರೀಕ್ಷಾ ಮೇಲ್ವಿಚಾರಕರಿಗೆ ಮನವಿ ಮಾಡಿದ ಮೇರೆಗೆ 11:45 ರಿಂದ 2:45 ವರೆಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ.

 

ಉಜಿರೆ ಬೆನಕ ಆಸ್ಪತ್ರೆಯ ಮುಖಸ್ಥರಾದ ಡಾ.ಗೋಪಾಲಕೃಷ್ಣ ಅವರು ತಮ್ಮ ಆಸ್ಪತ್ರೆಯ ಆಂಬುಲೆನ್ಸ್ ನೀಡಿ ಅದರಲ್ಲಿ ನರ್ಸ್ ನಳಿನಾಕ್ಷಿ ಮತ್ತು ಚಾಲಕ ದಿನೇಶ್ ಇಬ್ಬರನ್ನು ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿನಿ ಜೊತೆ ನೋಡಿಕೊಳ್ಳಲು ಕಳುಹಿಸಿದ್ದು ಬೆಳಿಗ್ಗೆ 11:45 ರಿಂದ 2:45 ಗಂಟೆವರೆಗೆ ನರ್ಸ್ ಮತ್ತು ಆಂಬುಲೆನ್ಸ್ ಇದ್ದು ಪರೀಕ್ಷೆ ಮುಗಿದ ಬಳಿಕ ವಾಪಸ್ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತಂದು  ಚಿಕಿತ್ಸೆ ಮುಂದುವರಿಸಿದ್ದಾರೆ.

ಇನ್ನೂ ವಿದ್ಯಾರ್ಥಿನಿ ತನ್ವಿ ಉತ್ತಮ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯಾಗಿದ್ದು ಅದಕ್ಕಾಗಿ ಕೊನೆಯ ಪರೀಕ್ಷೆ ಅಗಿರುವ ಕಾರಣ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಾತಾನಾಡಿ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ 9 ನೇ ತರಗತಿಯ  ವಿದ್ಯಾರ್ಥಿನಿಯ ಮೂಲಕ ತನ್ವಿ ಸ್ಟ್ರೆಚ್ಚರ್ ನಲ್ಲಿಯೇ ಪರೀಕ್ಷಾ ಕೊಠಡಿಯಲ್ಲಿ ಮಲಗಿಕೊಂಡು ಆಕೆ ಹೇಳಿದ ಹಾಗೆ ಪಕ್ಕದಲ್ಲಿ ಕುಳಿತುಕೊಂಡು ಪರೀಕ್ಷೆ ಬರೆದು ಮುಗಿಸಿದ್ದಾರೆ ಅದಲ್ಲದೆ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿಯವರು ತಾಯಿಯ ಜೊತೆ‌ಯಲ್ಲಿದ್ದರು.

ತನ್ವಿಯ ಆಸ್ಪತ್ರೆಯ ಚಿಕಿತ್ಸಾ ಖರ್ಚು ವೆಚ್ಚವನ್ನೆಲ್ಲ ಲಾಯಿಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಭರಿಸಿದೆ ಎಂದು ಮೂಲಗಳು ತಿಳಿಸಿದೆ.

error: Content is protected !!