ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ 40 ಪರ್ಸೆಂಟ್​​ ಕಮಿಷನ್​ ಆರೋಪ : ನಾಪತ್ತೆಯಾಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ.

 

 

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು ಇದೀಗ ಉಡುಪಿಯ ಲಾಡ್ಜೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ . ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್​​ ಆ್ಯಪ್​​ ಮೆಸೇಜ್ ಕಳಿಸಿ ನಾಪತ್ತೆ ಆಗಿದ್ದರು ಎಂದು ತಿಳಿದು ಬಂದಿದೆ.

ವಾಟ್ಸ್​​ ಆ್ಯಪ್​​ ಮೆಸೇಜ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ ನೋಟ್ ಕಳಿಸಿದ್ದಾರೆ.ಸಚಿವ ಈಶ್ವರಪ್ಪ ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಸಂತೋಷ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

error: Content is protected !!