ಬೆಳ್ತಂಗಡಿ :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಶೇ 40 ಪರ್ಸೆಂಟ್ ಕಮೀಷನ್ ಆರೋಪಿಸಿ ಡೆತ್ ನೋಟ್ ವಾಟ್ಸಪ್ ಮಾಡಿ ನಾಪತ್ತೆಯಾಗಿ ಉಡುಪಿಯಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಆರೋಪಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಮೂರು ಮಾರ್ಗದ ಬಳಿ ಪ್ರತಿಭಟನೆ ನಡೆಯಿತು. ಸಂತೋಷ್ ಪಾಟೀಲ್ ಅವರ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣ ಅದ್ದರಿಂದ ತಕ್ಷಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ನಂತರ ರಸ್ತೆ ತಡೆ ನಡೆಸಿ ಈಶ್ವರಪ್ಪ ಅವರ ಪ್ರತಿ ಕೃತಿ ದಹಿಸಿ ಘೋಷಣೆಗಳನ್ಬು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳ್ತಂಗಡಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಎಸ್.ಕೆ.ಹಕೀಂ ಕೊಕ್ಕಡ, ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ ,ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಘವೇಂದ್ರ ಪೂಜಾರಿ, ಇಂಟಕ್ ನಗರ ಅಧ್ಯಕ್ಷ ನವೀನ್ ಗೌಡ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ, ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನಿರಾಲ್ಕೆ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಭಿದೇವ್ ಅರಿಗಾ,ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ಖಾಲಿದ್ ಕೆಎಚ್,ಗಣೇಶ್ ಕಣಿಯೂರು, ಆರೀಫ್, ನೌಷದ್ ನಾವೂರ, ಗುರುರಾಜ್ ಗುರಿಪಳ್ಳ , ಮನೋಹರ್ ಇಳಂತಿಲ ,ಸುಧೀರ್ ದೇವಾಡಿಗ, ಪ್ರಜ್ವಲ್ ಜೈನ್ ಇದ್ದರು.