ಬೆಳ್ತಂಗಡಿ : ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಉಭಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ತಾಲೂಕಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಸನ್ಮಾನ ಎ. 14 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಂಕೀರ್ಣದಲ್ಲಿ ನಡೆಯಿತು.
ಮಾಜಿ ಶಾಸಕ, ಪಕ್ಷದ ಹಿರಿಯ ನಾಯಕ ಕೆ. ವಸಂತ ಬಂಗೇರ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹರೀಶ್ ಕುಮಾರ್ ಅವರು ಸಂವಿಧಾನವನ್ನು ಗೌರವಿಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದರು.
ಸಮಾಜ ಪರಿವರ್ತನಾ ಚಳವಳಿಯ ಮುಖಂಡ ಡೀಕಯ್ಯ ಪದ್ಮುಂಜ ರವರು ಡಾ| ಬಿ.ಆರ್ ಅಂಬೇಡ್ಕರ್ ಬಗ್ಗೆ ವಿಚಾರ ಮಂಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಳ್ತಂಗಡಿ ಬ್ಲಾಕ್ ಕಾಗ್ರೇಸ್ ಉಭಯ ಸಮಿತಿಯ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ರಾಜ್ಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ಎಸ್ ಸಿ ಘಟಕದ ಅಧ್ಯಕ್ಷ ರವಿ ನೇತ್ರಾವತಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಅಲ್ಪ ಸಂಖ್ಯಾ ಘಟಕ ಅಶ್ರಫ್ ನೆರಿಯ, ಸಲೀಂ, ಮಹಿಳಾ ಘಟಕದ ಅಧ್ಯಕ್ಷರುಗಳಾದ ನಮಿತಾ ಪೂಜಾರಿ, ವಂದನಾ, ಪ್ರಮುಖ ರಾದ ಇಸ್ಮಾಯಿಲ್ ಪೆರಿಂಜೆ, ನಿತ್ಯಾನಂದ ಡಿ, ದಯಾನಂದ ದೇವಾಡಿಗ ವೇಣೂರು, ನೇಮಿರಾಜ್ ಕಿಲ್ಲೂರು, ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ನೀರಲ್ಕೆ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತಾಲೂಕಿನ 30ಮಂದಿ ಸಾಧಕರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಗಿತು